KannadaKaliyona

Basavanna Vachanagalu in kannada | ಬಸವಣ್ಣ ವಚನಗಳು

Basavanna was a 12th-century Indian Hindu philosopher, minister in the court of the Kalachuri king Bijjala, and a social reformer.

He was a Kannada poet in the Shiva centered devotional movement. Basavanna spread social awareness through Basavanna vachanas, they rejected gender, social discrimination, superstitions. Introduced Ishtalinga necklace (Shiva Linga) as a constant reminder of Shiva’s devotion. It is worshiped by all.

About Basavanna

As the chief minister of his kingdom, he had the Anubhava Mandapa, where men and women of all socio-economic backgrounds were welcomed to freely discuss spiritual and worldly questions. There is historical evidence that there were 770 Amarganams with Basavanna and 1,96,000 surrenders.

Basavanna is said to have been born in 1134 in the village of Basavan Bagewadi in present-day Bijapur district (Ingaleshwar village, the home of Basavanna’s mother).

Born to Sri Madrasa and Madalambike. Basavanna was against the rituals of Vedic culture from his childhood. Akka spent her childhood with Nagamma and Bhava Shivaswamy.

At the age of 8, when he comes to give cattle to Basavanna as per the Brahmin tradition, Basavanna asks his older sister Nagamma to give it to him, saying that it is only given to men and therefore her sister cannot give it, Basavanna leaves the house protesting against male/female inequality.

Basavanna studied at the Hindu temple at Kundalasangam for twelve years.He then finished his studies at Sangameshwara, a Shaivite school of the Lakulisha-Pashupata tradition. Basava married a cousin from his mother’s side. His wife Gangambike Kalachuri was the daughter of Prime Minister Raja Bijja.

Basavanna Vachanagalu in kannada

1.ಕಪ್ಪೆ ಸರ್ಪನ ನೆಳಲಲ್ಲಿಪ್ಪಂತೆನಗಾಯಿತ್ತಯ್ಯಾ!
ಅಕಟಕಟಾ ಸಂಸಾರ ವೃಥಾ ಹೋಯಿತಲ್ಲಾ!
ಕರ್ತುವೇ ಕೂಡಲಸಂಗಮದೇವಾ
ಇವ ತಪ್ಪಿಸಿ ಎನ್ನನು ರಕ್ಶಿಸಯ್ಯಾ.

2.ಭವಬಂಧನ ಭವಪಾಶವಾದ ಕಾರಣವೇನಯ್ಯಾ?
ಹಿಂದಣ ಜನ್ಮದಲಿ ಲಿಂಗವ ಮರೆದೆನಾಗಿ,
ಹಿಂದಣ ಸಿರಿಯಲ್ಲಿ ಜಂಗಮನ ಮರೆದೆನಾಗಿ
ಅರಿದೋಡೀ ಸಂಸಾರವ ಹೊದ್ದಲೀವನೆ ಕೂಡಲಸಂಗಮದೇವಾ.

3. ಎಂದೊ, ಸಂಸಾರದ ದಂದುಗ ಹಿಂಗುವುದು ?
ಎಂದೊ, ಮನದಲ್ಲಿ ಪರಿಣಾಮವಹುದೆನಗೆಂದೋ, ಎಂದೋ ?
ಕೂಡಲಸಂಗಮದೇವಾ,
ಇನ್ನೆಂದೋ ಪರಮಸಂತೋಷದಲ್ಲಿಹುದೆನಗೆಂದೋ.

4. ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದೊಡೆ ನಿಮ್ಮಾಣೆ, ನಿಮ್ಮ
ಪ್ರಮಥರಾಣೆ! ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ದೆರೆಯೆನಯ್ಯಾ, ಪ್ರಥಮ ಭವಾಂತರದಲ್ಲಿ
ಶಿಲಾದನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಭೃತ್ಯನ ಮಾಡಿಯೆನ್ನ
ನಿರಿಸಿಕೊಂಡಿರ್ದಿರಯ್ಯಾ, ಎರಡನೆಯ ಭವಾಂತರದಲ್ಲಿ ಸ್ಕಂದನೆಂಬ ಗಣೇಶ್ವರನ
ಮಾಡಿ ಹೆಸರಿಟ್ಟು ಕರೆದು ನಿಮ್ಮ ಕಾರುಣ್ಯವ ಮಾಡಿಸಿಕೊಂಡಿರ್ದಿರಯ್ಯಾ,
ಮೂರನೆಯ ಭವಾಂತರದಲ್ಲಿ ನೀಲಲೋಹಿತನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮ್ಮ ಲೀಲಾ ವಿನೋದದಿಂದಿರಿಸಿಕೊಂಡಿರ್ದಿರಯ್ಯಾ,
ನಾಲ್ಕನೆಯ ಭವಾಂತರದಲ್ಲಿ ಮನೋಹರನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮ್ಮ ಮನಃ ಪ್ರೇರಕನಾಗಲೆಂದಿರಿಸಿಕೊಂಡಿರ್ದಿರಯ್ಯಾ.


ಐದನೆಯ ಭವಾಂತರದಲ್ಲಿ ಕಾಲಲೋಚನನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ಸರ್ವಕಾಲ ಸಂಹಾರವ ಮಾಡಿಸುತ್ತಿರ್ದಿರಯ್ಯಾ.
ಆರನೆಯ ಭವಾಂತರದಲ್ಲಿ ವೃಶ್ಹಭನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮಗೇರಲು ವಾಹನವಾಗಲೆಂದಿರಿಸಿಕೊಂಡಿರ್ದಿರಯ್ಯಾ.
ಏಳನೆಯ ಭವಾಂತರದಲ್ಲಿ ಬಸವನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮ್ಮೊಕ್ಕುದಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿರ್ದಿರಯ್ಯಾ.
ಇದು ಕಾರಣ ಕೂಡಲಸಂಗಮದೇವಾ, ನೀವು ಬರಿಸಿದ ಭವಾಂತರದಲ್ಲಿ ನಾನು
ಬರುತಿರ್ದೆನಯ್ಯಾ.

5. ಅಯ್ಯಾ, ನಿಮ್ಮ ಶರಣನ ಮರ್ತ್ಯಕ್ಕೆ ತಂದೆಯಾಗಿ ನೆನೆನೆನೆದು
ಸುಖಿಯಾಗಿಯಾನು ಬದುಕಿದೆನಯ್ಯಾ. ಅದೇನು ಕಾರಣ
ತಂದೆಯಿಂದರಿದೆನಯ್ಯಾ. ಅರಿದರಿದು ನಿಮ್ಮ ಶರಣನು
ಆಚರಿಸುವಾಚರಣೆಯ ಕಂಡು ಕಣ್ದೆರೆದೆನಯ್ಯಾ ಕೂಡಲಸಂಗಮದೇವಾ.

6. ’ಕರಿಘನ ಅಂಕುಶ ಕಿರಿದೆ’ನ್ನಬಹುದೆ? ಬಾರದಯ್ಯಾ.
’ಗಿರಿಘನ ವಜ್ರ ಕಿರಿದೆ’ನ್ನಬಹುದೆ? ಬಾರದಯ್ಯಾ.
ತಮ್ಮಂಥ ಘನ ಜ್ಯೋತಿ ಕಿರಿದೆನ್ನಬಹುದೆ? ಬಾರದಯ್ಯ.
’ಮರಹು ಘನ ನಿಮ್ಮ ನೆನೆವ ಮನ ಕಿರಿದೆ’ನ್ನಬಹುದೆ? ಬಾರದಯ್ಯಾ
ಕೂಡಲಸಂಗಮದೇವಾ.

7. ಕಾಳಿಯ ಕಣ್ ಕಾಣದಿಂದ ಮುನ್ನ,
ತ್ರಿಪುರ ಸಂಹಾರದಿಂದ ಮುನ್ನ,
ಹರಿವಿರಂಚಿಗಳಿಂದ ಮುನ್ನ,
ಉಮೆಯ ಕಳ್ಯಾಣದಿಂದ ಮುನ್ನ,
ಮುನ್ನ, ಮುನ್ನ, ಮುನ್ನ,
– ಅಂದಿಂಗೆಳೆಯ ನೀನು,
ಹಳೆಯ ನಾನು ಮಹಾದಾನಿ ಕೂಡಲಸಂಗಮದೇವಾ.

8. ಸಂಸಾರ ಸಾಗರನ ತೆರೆಕೊಬ್ಬಿ ಮುಖದ ಮೇಲೆ ಅಲೆಯುತ್ತಿದ್ದುದೇ ನೋಡಾ!
ಸಂಸಾರಸಾಗರ ಉರದುದ್ದವೇ? ಹೇಳಾ! ಸಂಸಾರ ಸಾಗರ ಕೂರಲುದ್ದವೇ?
ಹೇಳಾ? ಸಂಸಾರ ಸಾಗರ ಸಿರದುದ್ದವಾದ ಬಳಿಕ ಏನ ಹೇಳುವೆನಯ್ಯಾ?
ಅಯ್ಯಾ, ಅಯ್ಯಾ, ಎನ್ನ ಹುಯ್ಯಲ ಕೇಳಯ್ಯ? ಕೂಡಲಸಂಗಮದೇವಾ ನಾನೇನೆನುವೆನಯ್ಯಾ?

9. ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ
ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯಾ!
ಇಂದೆನ್ನ ದೇಹಕ್ಕೆ ಗ್ರಹಣವಾಯಿತು,
ಇನ್ನೆಂದಿಗೆ ಮೋಕ್ಶವಹುದೋ ಕೂಡಲಸಂಗಮದೇವಾ

10. ಇಲಿ ಗಡಹನೊಡ್ಡಿದಲ್ಲಿರ್ಪಂತೆ ಎನ್ನ ಸಂಸಾರ ತನು ಕೆಡುವನ್ನಕ್ಕ ಮಾಣದು;
ಹೆರರ ಬಾಧಿಸುವುದು ತನು ಕೆಡುವನ್ನಕ್ಕಮಾಣದು.
ಹೆರರ ಚ್ಹಿದ್ರಿಸುವುದು ತನು ಕೆಡುವನ್ನಕ್ಕ ಮಾಣದು
ಅಕಟಕಟಾ! ಸಂಸಾರಕ್ಕಾಸತ್ತೆ ಕೂಡಲಸಂಗಮದೇವಾ.

11. ಉದಕದೊಳಗೆ ಬಚ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು,
ಸಸಿಯೊಳಗಣ ರಸದ ರುಚಿಯಂತಿದ್ದಿತ್ತು,
ನನೆಯೊಳಗಣ ಪರಿಮಳದಂತಿದ್ದಿತ್ತು,
ನಿಮ್ಮ ನಿಲುವು ಕೂಡಲಸಂಗಮದೇವಾ,
ಕನ್ಯೆಯ ಸ್ನೇಹದಂತಿದ್ದಿತ್ತು.

12. ಶೂಲದ ಮೇಲಣ ವಿಭೋಗವೇನಾದೊಡೇನೋ?
ನಾನಾವರ್ಣದ ಸಂಸಾರ ಹಾವ-ಹಾವಡಿಗನ ಸ್ನೇಹದಂತೆ!
ತನ್ನಾತ್ಮ ತನಗೆ ಹಗೆಯಾದ ಬಳಿಕ ಬಿನ್ನಾಣವುಂಟೆ!
ಮಹಾದಾನಿ ಕೂಡಲಸಂಗಮದೇವಾ.

13. ಸಂಸಾರವೆಂಬ ಬಲೆಯಲ್ಲಿ ಸಿಲುಕಿದೆನಯ್ಯಾ,
ಎನ್ನನು ಕಾಯಯ್ಯಾ ಸಂಗಮದೇವಾ ಹುರುಳಿಲ್ಲ ಹುರುಳಿಲ್ಲ!
ಶಿವಧೋ! ಶಿವಧೋ!

14. ನಾನೊಂದು ನೆನೆದೊಡೆ ತಾನೊಂದು ನೆನೆವುದು,
ನಾವಿತ್ತಲೆಳೆ ದೊಡೆ ತಾನತ್ತಲೆಳೆವುದು;
ತಾ ಬೇರೆಯೆನ್ನನಳಲಿಸಿ ಕಾಡಿತ್ತು.
ತಾ ಬೇರೆಯೆನ್ನ ಬಳಲಿಸಿ ಕಾಡಿತ್ತು.
ಕೂಡಲಸಂಗನ ಕೂಡಿಹೆನೆಂದೊಡೆ ತಾನೆನ್ನ ಮುಂದುಗೆಡಿಸಿತ್ತು ಮಾಯೆ!

15. ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ!
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ!
ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ!
ಇದಾವ ಪರಿಯಲ್ಲಿ ಕಾಡಿತ್ತು ಮಾಯೆ
ಈ ಮಾಯೆಯ ಕಳೆವೊಡೆ ಯೆನ್ನಳವಲ್ಲ,
ನೀವೇ ಬಲ್ಲಿರಿ ಕೂಡಲಸಂಗಮದೇವಾ.

16. ಕೊಡೆವಿಡಿದು ಕುದುರೆಯ ದೃಢವುಳ್ಳ ರಾವುತನೇರಿ ಕೊಡೆ
ಕೋಟಿ, ಶೂರರು, ಹನ್ನಿಬ್ಬರಯ್ಯಾ! ಚ.ದ್ರಕಾಂತ ಗಿರಿಯ
ಗಜ ಬಂದು ಮೂದಲಿಸಿ ಅರಿದು ಕೊಲುವೊಡೆ ರಿಪುಗಳ ಕಲಿತನವನೋಡಾ!
ಅವಿಗೆಯೊಳಡಗಿದ ಪುತ್ಥಳಿಯ ರೂಹಿನಂತಾಯಿತ್ತು,
ಕೂಡಲಸಂಗಮದೇವಾ ನಿಮ್ಮ ಹೆಸರಿಲ್ಲದ ಹೆಸರು.

17. ಇಂದಿಗೆಂತು ನಾಳಿಗೆಂತು ಎಂದು ಬೆಂದೊಡಲ ಹೊರೆಯ
ಹೋಯಿತ್ತೆನ್ನ ಸಂಸಾರ! ಹಿಂದೆ ನಾನಾ ಯೋನಿಯಲ್ಲಿ ಬಂದೆನೆಂಬ
ಹೇಯವಿಲ್ಲಾ; ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿಯಿಲ್ಲಾ!
ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೆ
ಕೊಂದುದಯ್ಯಾ ಈ ಮಾಯೆ ಕೂಡಲಸಂಗಮದೇವಾ.

18. ದಿಟ ಪುಟ ಭಕುತಿ ಸಂಪುಟ ನೆಲೆಗೊಳ್ಳದಾಗಿ
ಟಿಂಬಕನನಾಡಿಸುತ್ತಿದ್ದಿತಯ್ಯಾ ನಿನ್ನ ಮಾಯೆ;
ಟೀಕವ ಟಿಂಬಕನಾಡಿಸುತ್ತಿದ್ದಿತಯ್ಯಾ ನಿನ್ನ ಮಾಯೆ;
ಕೂಡಲಸಂಗಮದೇವಯ್ಯಾ, ಹೊನ್ನ ಹೆಣ್ಣ ಮಣ್ಣ ತೋರಿ.

19.  ಆಸತ್ತೆ ಅಲಸಿದೆನೆಂದಡೆ ಮಾಣದು,
ಬೇಸತ್ತೆ ಬೆಂಬಿದ್ದೆನೆಂದಡೆ ಮಾಣದು,
ಏವೆನೇವೆನೆಂದಡೆ ಮಾಣದು,
ಕಾಯದ, ಕರ್ಮದ ಫಲಭೋಗವು !
ಕೂಡಲಸಂಗನ ಶರಣರು ಬಂದು
ಹೋ ಹೋ, ಅಂಜದಿರೆಂದಡಾನು ಬದುಕುವೆನು.

20. ಕರಿಯಂಜುವುದು ಅಂಕುಶಕ್ಕಯ್ಯಾ,
ಗಿರಿಯಂಜÅವುದು ಕುಲಿಶಕ್ಕಯ್ಯಾ,
ತಮಂಧವಂಜುವುದು ಜ್ಯೋತಿಗಯ್ಯಾ,
ಕಾನನವಂಜುವುದು ಬೇಗೆಗಯ್ಯಾ,
ಪಂಚಮಹಾಪಾತಕವಂಜುವುದು
ಕೂಡಲಸಂಗನ ನಾಮಕ್ಕಯ್ಯಾ

Basavanna Vachana in Kannada

21 ಒಂದು ಮೊಲಕ್ಕೆ ನಾಯನೊಂಬತ್ತು ಬಿಟ್ಟಂತೆ,
ಎನ್ನ ಬಿಡು, ತನ್ನ ಬಿಡು ಎಂಬುದು ಕಾಯವಿಕಾರ,
ಎನ್ನ ಬಿಡು, ತನ್ನ ಬಿಡು, ಎಂಬುದು ಮನೋವಿಕಾರ.
ಕರಣೇಂದ್ರಿಯಂಗಳೆಂಬ ಸೊಣಗ ಮುಟ್ಟದ ಮುನ್ನ
ಮನ ನಿಮ್ಮನೈದುಗೆ, ಕೂಡಲಸಂಗಮದೇವಾ.

22    ಲೇಸ ಕಂಡು ಮನ ಬಯಸಿ ಬಯಸಿ
ಆಸೆ ಮಾಡಿದಡಿಲ್ಲ ಕಂಡಯ್ಯಾ.
ತಾಳಮರಕ್ಕೆ ಕೈಯ ನೀಡಿ
ಮೇಲೆ ನೋಡಿ ಗೋಣು ನೊಂದುದಯ್ಯಾ.
ಕೂಡಲಸಂಗಮದೇವಾ ಕೇಳಯ್ಯಾ,
ನೀನೀವ ಕಾಲಕ್ಕಲ್ಲದಿಲ್ಲ ಕಂಡಯ್ಯಾ !

23    ಮುನ್ನ ಮಾಡಿದ ಪಾಪ ಬೆನ್ನ ಬಿಡದನ್ನಕ್ಕ
ಇನ್ನು ಬಯಸಿದಡುಂಟೆ ?
ಭಕ್ತಿಯುಳ್ಳವರ ನೋಡಿ ನೋಡಿ ಬಯಸಿದಡುಂಟೆ,
ಕೂಡಲಸಂಗಮದೇವರಲ್ಲಿ ಮುನ್ನ ವರವ ಹಡೆಯದನ್ನಕ್ಕ?

24  ವಚನದ ಹುಸಿ ನುಸುಳೆಂತು ಮಾಬುದೆನ್ನ
ಮನದ ಮರ್ಕಟತನವೆಂತು ಮಾಬುದೆನ್ನ
ಹೃದಯದ ಕಲ್ಮಷವೆಂತು ಮಾಬುದೆನ್ನ
ಕಾಯವಿಕಾರಕ್ಕೆ ತರಿಸಲುವೋದೆನು,
ಎನಗಿದು ವಿಧಿಯೇ, ಕೂಡಲಸಂಗಮದೇವಾ.

25    ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆ
ಧರೆ ಹತ್ತಿ ಉರಿದಡೆ ನಿಲಲುಬಾರದು.
ಏರಿ ನೀರುಂಬಡೆ, ಬೇಲಿ ಕೆಯ್ಯ ಮೇವಡೆ,
ನಾರಿ ತನ್ನ ಮನೆಯಲ್ಲಿ ಕಳುವಡೆ,
ತಾಯ ಮೊಲೆವಾಲು ನಂಜಾಗಿ ಕೊಲುವಡೆ,
ಇನ್ನಾರಿಗೆ ದೂರುವೆ ಕೂಡಲಸಂಗಮದೇವಾ !

26  ವಶ್ಯವ ಬಲ್ಲೆವೆಂದೆಂಬಿರಯ್ಯಾ,
ಬುದ್ಧಿಯನರಿಯದ ಮನುಜರು ಕೇಳಿರಯ್ಯಾ.
ವಶ್ಯವಾವುದೆಂದರಿಯದೆ ಮರುಳುಗೊಂಬಿರಿ,
ಎಲೆ ಗಾವಿಲ ಮನುಜರಿರಾ.
ಓಂ ನಮಃ ಶಿವಾಯ ಎಂಬ ಮಂತ್ರ ಸರ್ವಜನವಶ್ಯ
ಕೂಡಲಸಂಗಮದೇವಾ.

27    ಬೆದಕದಿರು ಬೆದಕದಿರು, ಬೆದಕಿದಡೆ ಹುರುಳಿಲ್ಲ,
ಚಿತ್ತರಟ್ಟೆಯ ಕಾಯಲ್ಲಿ ಮತ್ತೇನನರಸುವಿರಯ್ಯಾ
ನಿಮ್ಮ ಉತ್ತಮಿಕೆಯ ಪೂರೈಸುವುದು
ಕೂಡಲಸಂಗಮದೇವಾ.

28  ಭವಬಂಧನ ದುರಿತಂಗಳ ಗೆಲುವಡೆ
ಓಂ ನಮಃ ಶಿವಶರಣೆಂದಡೆ ಸಾಲದೆ
ಹರ ಹರ ಶಂಕರ, ಶಿವ ಶಿವ ಶಂಕರ,
ಜಯ ಜಯ ಶಂಕರ ಶರಣೆನುತ್ತಿದ್ದೇನೆ.
ಎನ್ನ ಪಾತಕ ಪರಿಹರ,
ಕೂಡಲಸಂಗಮದೇವಾ ಶರಣೆನುತ್ತಿದ್ದೇನೆ

29    ಎನ್ನ ನಡೆಯೊಂದು ಪರಿ, ಎನ್ನ ನುಡಿಯೊಂದು ಪರಿ,
ಎನ್ನೊಳಗೇನೂ ಶುದ್ಧವಿಲ್ಲ ನೋಡಯ್ಯಾ.
ನುಡಿಗೆ ತಕ್ಕ ನಡೆಯ ಕಂಡಡೆ
ಕೂಡಲಸಂಗಮದೇವನೊಳಗಿಪ್ಪನಯ್ಯಾ.

30   ಮುಂಗೈಯ ಕಂಕಣಕ್ಕೆ ಕನ್ನಡಿಯ ತೋರುವಂತೆ
ಎನ್ನ ಮನವು ನಿಧಾನವನೊಲ್ಲದೆ ಜಲಗ ಮಚ್ಚಿತ್ತು ನೋಡಾ.
ನಾಯಿಗೆ ನಾರಿವಾಣವಕ್ಕುವುದೆ
ಕೂಡಲಸಂಗಮದೇವಾ.

Vachanas of Basavanna

31  ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು,
ನಿಂದಲ್ಲಿ ನಿಲಲೀಯದೆನ್ನ ಮನವು,
ಹೊಂದಿದಲ್ಲಿ ಹೊಂದಲೀಯದೆನ್ನ ಮನವು
ಕೂಡಲಸಂಗಮದೇವಾ
ನಿಮ್ಮ ಚರಣಕಮಲದಲ್ಲಿ ಭ್ರಮರನಾಗಿರಿಸು, ನಿಮ್ಮ ಧರ್ಮ.

32    ಮರನನೇರಿದ ಮರ್ಕಟನಂತೆ
ಹಲವು ಕೊಂಬೆಗೆ ಹಾಯುತ್ತಲಿದ್ದೇನೆ,
ಬೆಂದ ಮನವ ನಾನೆಂತು ನಂಬುವೆನಯ್ಯಾ
ಎಂತು ನಚ್ಚುವೆನಯ್ಯಾ
ಎನ್ನ ತಂದೆ ಕೂಡಲಸಂಗಮದೇವನಲ್ಲಿಗೆ
ಹೋಗಲೀಯದಯ್ಯಾ

33   ಅಂದಣವನೇರಿದ ಸೊಣಗನಂತೆ
ಕಂಡಡೆ ಬಿಡದು ತನ್ನ ಮುನ್ನಿನ ಸ್ವಭಾವವನು.
ಸುಡು, ಸುಡು, ಮನವಿದು ವಿಷಯಕ್ಕೆ ಹರಿವುದು,
ಮೃಡ ನಿಮ್ಮನನುದಿನ ನೆನೆಯಲೀಯದು.
ಎನ್ನೊಡೆಯ ಕೂಡಲಸಂಗಮದೇವಾ
ನಿಮ್ಮ ಚರಣವ ನೆನೆವಂತೆ ಕರುಣಿಸು-
ಸೆರಗೊಡ್ಡಿ ಬೇಡುವೆ, ನಿಮ್ಮ ಧರ್ಮ.

34   ತುಪ್ಪದ ಸವಿಗೆ ಅಲಗ ನೆಕ್ಕುವ ಸೊಣಗನಂತೆ ಎನ್ನ ಬಾಳುವೆ.
ಸಂಸಾರಸಂಗವ ಬಿಡದು ನೋಡೆನ್ನ ಮನವು.
ಈ ನಾಯಿತನವ ಮಾಣಿಸು-
ಕೂಡಲಸಂಗಮದೇವಯ್ಯಾ, ನಿಮ್ಮ ಧರ್ಮ.

35  ಅರಿಯದೆ ಜನನಿಯ ಜಠರದಲ್ಲಿ
ಬಾರದ ಭವಂಗಳ ಬರಿಸಿದೆ ತಂದೆ,
ಹುಟ್ಟಿತ್ತೆ ತಪ್ಪಾಯಿತ್ತೆ, ಎಲೆ ಲಿಂಗವೆ ?
ಮುನ್ನ ಹುಟ್ಟಿದುದಕ್ಕೆ ಕೃಪೆಯ ಮಾಡು ಲಿಂಗವೆ !
ಇನ್ನು ಹುಟ್ಟಿದಡೆ ಕೂಡಲಸಂಗಮದೇವಾ, ನಿಮ್ಮಾಣೆ.

36     ದಂದುಗ ಬಿಡದು ಮನದ ಸಂದೇಹ ಹಿಂಗದಾಗಿ :
ಮುಂದೆ ಲಿಂಗವ ಕಂಡೆಹೆನೆಂಬುದು ಹುಸಿ ನೋಡಾ.
ಬೆಂದ ಕರಣಾದಿಗಳು ಒಂದೆ ಪಥವನರಿಯವು,
ಎಂತು ಶಿವಪಥವೆನಗೆ ಸಾಧ್ಯವಪ್ಪುದಯ್ಯಾ
ಎನ್ನ ತಂದೆ ಕೂಡಲಸಂಗಮದೇವಾ,
ನಿಮ್ಮ ಶರಣರ ಬಳಿವಿಡಿದಡೆ ಎನ್ನ ದಂದುಗ ಹಿಂಗುವುದು.

37   ತನ್ನ ವಿಚಾರಿಸಲೊಲ್ಲದು, ಇದಿರ ವಿಚಾರಿಸಹೋಹುದೀ ಮನವು.
ಏನ ಮಾಡುವೆನೀ ಮನವನು, ಎಂತು ಮಾಡುವೆನೀ ಮನವನು.
ಕೂಡಲಸಂಗಮದೇವನ ಶರಣರ
ನಚ್ಚದ ಮಚ್ಚದ ಬೆಂದ ಮನವನು.

38   ತನ್ನಿಚ್ಛೆಯ ನುಡಿದಡೆ ಮೆಚ್ಚುವುದೀ ಮನವು,
ಇದಿರಿಚ್ಚೆಯ ನುಡಿದಡೆ ಮೆಚ್ಚದೀ ಮನವು.
ಕೂಡಲಸಂಗನ ಶರಣರ
ನಚ್ಚದ ಮಚ್ಚದ ಮನವ ಕಿಚ್ಚಿನೊಳಗಿಕ್ಕು.

39   ಸುಡಲೀ ಮನವೆನ್ನನುಡುಹನ ಮಾಡಿತ್ತು,
ನಡೆವಲ್ಲಿ ನುಡಿವಲ್ಲಿ ಅಧಿಕನೆಂದೆನಿಸಿತ್ತು.
ಬೆಡಗಿನ ಕೀಲು ಕಳೆದು ಕೆಡೆದ ಬಳಿಕ
ಕಡುಗೂರ್ಪ ಮಡದಿ ತಾ ಮುಟ್ಟಲಮ್ಮಳು,
ಒಡಲನುರಿಕೊಂಬುದು, ಒಡವೆಯನರಸ ಕೊಂಬ,
ಕಡುಗೂರ್ಪ ಮಡದಿಯ ಮತ್ತೊಬ್ಬ ಚೆನ್ನಿಗ ಕೊಂಬ
ಮುನ್ನ ಮಾಡಿದುದು ತನ್ನ ಬೆನ್ನ ಬಿಡದನ್ನಕ್ಕ,
ಇನ್ನು ಮಾಡಿದರಳವೆ ಕೂಡಲಸಂಗಮದೇವಾ

40    ಚಂದ್ರೋದಯಕ್ಕೆ ಅಂಬುದ್ಥಿ ಹೆಚ್ಚುವುದಯ್ಯಾ,
ಚಂದ್ರ ಕುಂದೆ, ಕುಂದುವುದಯ್ಯಾ.
ಚಂದ್ರಂಗೆ ರಾಹು ಅಡ್ಡ ಬಂದಲ್ಲಿ
ಅಂಬುದ್ಥಿ ಬೊಬ್ಬಿಟ್ಟಿತ್ತೆ ಅಯ್ಯಾ
ಅಂಬುದ್ಥಿಯ ಮುನಿ ಆಪೋಶನವ ಕೊಂಬಲ್ಲಿ
ಚಂದ್ರಮನಡ್ಡ ಬಂದನೆ, ಅಯ್ಯಾ ?
ಆರಿಗಾರೂ ಇಲ್ಲ, ಕೆಟ್ಟವಂಗೆ ಕೆಳೆಯಿಲ್ಲ,
ಜಗದ ನಂಟ ನೀನೆ, ಅಯ್ಯಾ,
ಕೂಡಲಸಂಗಮದೇವಯ್ಯಾ!

Basavanna Vachanagalu in kannada in short

41.ನೀನೊಲಿದರೆ ಕೊರಡು ಕೊನರುವುದಯ್ಯಾ , ನೀನೊಲಿದರೆ ಬರಡು ಹಯನಹುದಯ್ಯಾ , ನೀನೊಲಿದರೆ ವಿಷವೇ ಅಮೃತವುದಯ್ಯಾ , ನೀನೊಲಿದರೆ ಸಕಲ ಪಡಿಪದಾರ್ಥ ಇದರಲ್ಲಿರ್ಪು ಕೂಡಲಸಂಗಮದೇವ.

42. ಆಸೆಯಾಮಿಷ ತಾಮಸ , ಹುಸಿ , ವಿಷಯ , ಕುಟಿಲ , ಕುಹಕ ,ಕ್ರೋದಿ ,
ಕ್ಷುದ್ರ , ಮಿಥ್ಯೆ ಇವನೆಲ್ಲಾ ನಾಲಿಗೆಯ ಮೇಲಿಂದತ್ತ ತೆಗೆದು ಕಳೆಯಯ್ಯಾ
ಅದೇಕೆಂದೊಡೆ ನಿಮ್ಮತ್ತಲೆನ್ನ ಬರಲೀಯವು , ಇದು ಕಾರಣ ಇವೆಲ್ಲವ ಕಳೆದು ಎನ್ನ ಪಂಚಯ್ಯವರು ಭಕ್ತನ ಮಾಡು ಕೂಡಲಸಂಗಮದೇವ.

43.ಗೀತವ ಹಾಡಿದರೇನು ? ಶಾಸ್ತ್ರ ಪುರಾಣವ ಕೇಳಿದೊಡೇನು ?
ವೇದವೇದಾಂತವನೋದಿದೊಡೇನು ? ಮನವೊಲಿದು ಲಿಂಗ-ಜಂಗಮ
ಪುಜಿಸಲರಿಯದವರು ಎಲ್ಲ ಬಲ್ಲ ಅನುಭವಿಯಾದೊಡೇನು ?
ಭಕ್ತಿ ಇಲ್ಲದವರನೋಲ್ಲ ಕೂಡಲಸಂಗಮದೇವ !!
ದಯವಿಲ್ಲದ ಧರ್ಮ ಅದಾವುದಯ್ಯಾ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ. ದಯವೇ ಧರ್ಮದ ಮೂಲವಯ್ಯಾ ಕೂಡಲಸಂಗಯ್ಯನಂತಲ್ಲದೊಲ್ಲನಯ್ಯ.

44. ಹಸಿದು ಬಂದ ಗಂಡನಿಗೆ ಉಣಲಿಕ್ಕದೆ ಬಡವಾದನೆಂದು ಮರಗುವ ಸತಿಯ ಸ್ನೇಹದಂತೆ ಬಂದುದನರಿಯಳು , ಇದ್ದುದ ಸವಿಯಳು , ದುಃಖವಿಲ್ಲದ ಅಕ್ಕೆ ಹಗರಣಿಗನ ತೆರನಂತೆ ಕೂಡಲಸಂಗಮದೇವಾ.

45.ಜಾತಿವಿಡಿದು ಸೂತಕವನರಸುವೆ . ಜ್ಯೋತಿವಿಡಿದು ಕತ್ತಲೆಯನರಸುವೆ 
ಇದೇಕೋ ಮಣಿ ಎಂಬುದು ವಚನ , ನಮ್ಮ ಕೂಡಲಸಂಗನ ಶರಣರ ಪಾದ ಪುರುಷನ ನಂಬು ಕೆಡಬೇಡ ಮಾನವ.

46. ನೆಲಗೊಂದೆ ಹೊಲಗೇರಿ ಶಿವಾಲಯಕ್ಕೆ, ಜಲವೊಂದೆ ಶೌಚಾಚಮನಕ್ಕೆ , ಕುಲವೊಂದೆ ತನ್ನತಾನರಿದವಂಗೆ , ಫಲವೊಂದೆ ಷಡುದರುಶನ ಮುಕ್ತಿಗೆ , ನಿಲವೊಂದೆ ನಿಮ್ಮನರಿದವಂಗೆ ಕೂಡಲಸಂಗಮ ದೇವಾ.

47. ಎನಗೆ ನಿಮ್ಮ ನೆನಹಾದಾದಲೇ ಉದಯ , ಎನಗೆ ನಿಮ್ಮ ಮರಹಾದಾಗಲೇ ಅಸ್ತಮಾನ , ಎನಗೆ ನಿಮ್ಮ ನೆನಹವೇ ಜೇವನ , ಎನಗೆ ನಿಮ್ಮ ನೆನಹವೇ ಪ್ರಾಣ ತಂದೆ , ಸ್ವಾಮಿ ! ಎನ್ನ ಹೃದಯದಲ್ಲಿ ನಿಮ್ಮ ಚರಣದುಂಡಿಗೆ ಒತ್ತಯ್ಯಾ , ಮನದಲ್ಲಿ ಷಡಕ್ಷರಿಯ ಬರೆಯಯ್ಯಾ ಕೂಡಲಸಂಗಮದೇವಾ.

48. ಮನವೇ ಸರ್ಪ , ತನುವೆ ಹೇಳಿಗೆ , ಹಾವಿನೊಡತನ ಹುದುವಾಳಿಗೆ . ಇನಾವಾಗ ಕೊಂದಹುದೆಂದರಿಯೆ , ಇನಾವಾಗ ತಿಂದಿಹುದೆಂದರಿಯೆ ! ನಿಮ್ಮ ಪೂಜಿಸಬಲ್ಲೊಡೆ ಅದೇ ಗರುಡ ಕೂಡಲಸಂಗಮದೇವಾ.

49. ಅತ್ತಲಿತ್ತಲು ಹೋಗದಂತೆ ಹೆಳವನ ಮಾಡಯ್ಯಾ , ತಂದೆ ; ಸುತ್ತಿಸುಳಿದು ನೋಡದಂತೆ ಕುರುಡನ ಮಾಡಯ್ಯಾ , ತಂದೆ ; ಮತ್ತೊಂದ ಕೇಳದಂತೆ ಮಾಡಯ್ಯಾ , ತಂದೆ ; ನಿಮ್ಮ ಶರಣರ ಪಾದವಲ್ಲದೆ ಅನ್ಯ ವಿಷಯಕ್ಕೇಳಸದಂತೆ ಇರಿಸು ಕೂಡಲಸಂಗಮದೇವ.

50. ಬಚ್ಚಲ ನೀರು ತಿಳಿದರೇನು ? ಸಲ್ಲದ ಹೊನ್ನು ಮತ್ತೆಲ್ಲಿದ್ದರೇನು ? ಆಕಾಶದ ಮಾವಿನ ಫಲವೆಂದರೇನು ? ಕೊಯ್ಯಲ್ಲಿಲ್ಲ, ಮೆಲ್ಲಲಿಲ್ಲಾ! ಕೂಡಲಸಂಗನ ಶರಣರ ಅನುಭವವಿಲ್ಲದವರು ಎಲ್ಲಿದ್ದರೇನು ? ಎಂತಾದರೇನು ?

51. ಕರಿಫನ ಅಂಕುಶ ಕಿರಿದೆನ್ನಬಹುದೇ ? ಬಾರದಯ್ಯಾ ,
ಗಿರಿಫನವಜ್ರ ಕಿರಿದೆನ್ನಬಹುದೇ ? ಬಾರದಯ್ಯಾ ,
ತಮಂದ ಘನಜ್ಯೋತಿ ಕಿರಿದೆನ್ನಬಹುದೇ ? ಬಾರದಯ್ಯಾ ,
ಮರಹುಘನ ನಿಮ್ಮ ನೆನೆವ ಮನ ಕಿರಿದೆನ್ನಬಹುದೇ ? ಬಾರದಯ್ಯಾ ,
ಕೂಡಲ ಸಂಗಮದೇವಾ.

52. ಇಂದಿಗೆಂತು ನಾಲೆಗೆಂದು ಎಂದು ಬೆಂದೊಡಲ ಹೊರೆಯ ಹೋಯಿತೆನ್ನ ಸಂಸಾರ !
ಹಿಂದೆ ನಾನಾ ಯೋನಿಯಲ್ಲಿ ಬಂದೆನೆಂಬ ಹೇಯವಿಲ್ಲಾ , ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿ ಇಲ್ಲಾ , ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೇ ಕೊಂದುದಯ್ಯಾ ಈ ಮಾಯೆ ಕೂಡಲ ಸಂಗಮದೇವಾ.

53. ಹಸಿರು ಎಕ್ಕೆಯ ಕಾಯ ಮೆಲಬಹುದೇ ? ನೀರಡಿಸಿ ವಿಷವ ನೀರೆಯಬಹುದೇ ? ಸುಣ್ಣದ ತುಯ್ಯಲ ಬಣ್ಣವೊಂದೆ ಎಂದರೆ ನೆಂಟತನಕ್ಕೆ ಉಣ್ಣಬಹುದೇ ? ಲಿಂಗ ಸಾರಾಯ ಸಜ್ಜನಗಲ್ಲದವರ ಕೂಡಲಸಂಗಮ ದೇವನೆಂತೊಲಿವನು ?

We hope you all like Basavanna Vachanagalu in kannada. Do share this to your Family & Friends.

Share this:

Like this:

Like Loading...
error: Content is protected !!

Discover more from KannadaKaliyona

Subscribe now to keep reading and get access to the full archive.

Continue reading